×
Ad

ಉಪ್ಪಿನಂಗಡಿ: ಮುಗೇರಡ್ಕ ನದಿಯಲ್ಲಿ ಮೊಸಳೆ ಪತ್ತೆ

Update: 2025-10-31 14:53 IST

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಮುಗೇರಡ್ಕದಲ್ಲಿ ನೇತ್ರಾವತಿ ನದಿಗೆ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಇದರ ಪಕ್ಕದ ಮರಳಿನ ದಿಬ್ಬದಲ್ಲಿ ಅ.30ರಂದು ಸಂಜೆ ಮೊಸಳೆಯೊಂದು ವಿಶ್ರಾಂತಿ ಪಡೆಯುತ್ತಿರುವುದು ಕಂಡು ಬಂದಿದೆ.

ಸೇತುವೆ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರು ಮೊಸಳೆಯನ್ನು ನೋಡಿ ನಾಗರಿಕರಿಗೆ ಮಾಹಿತಿ ನೀಡಿದ್ದು, ಸ್ಥಳೀಯರು ನದಿಯಲ್ಲಿ ಮೊಸಳೆಯಿರುವ ಬಗ್ಗೆ ಅರಣ್ಯ ಇಲಾಖೆಗೂ ಮಾಹಿತಿ ನೀಡಿದ್ದಾರೆ. ನೇತ್ರಾವತಿ ಹಾಗೂ ಕುಮಾರಧಾರ ನದಿಗಳಲ್ಲಿ ಹಲವು ಕಡೆಗಳಲ್ಲಿ ಈಗಾಗಲೇ ಮೊಸಳೆಗಳು ಕಾಣಿಸಿಕೊಂಡಿದ್ದು, ಆದ್ದರಿಂದ ನದಿಗಳಿಯುವವರು ಎಚ್ಚರಿಕೆ ವಹಿಸಬೇಕಾದ ಅಗತ್ಯ ಇದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News