ಸೌಜನ್ಯಾ ಅತ್ಯಾಚಾರ-ಹತ್ಯೆ ಪ್ರಕರಣ: ಮೃತದೇಹ ಪತ್ತೆಯಾಗಿದ್ದ ಸ್ಥಳಕ್ಕೆ ಎಸ್ಐಟಿ ಭೇಟಿ, ಮಹಜರು
ಬೆಳ್ತಂಗಡಿ, ಅ.31: ಸೌಜನ್ಯಾ ಅತ್ಯಾಚಾರ-ಹತ್ಯೆ ಪ್ರಕರಣದ ಮರು ತನಿಖೆ ನಡೆಸುತ್ತಿರುವ ಎಸ್ಐಟಿ ತಂಡದ ಅಧಿಕಾರಿಗಳು ಬಾಲಕಿಯ ಮೃತದೇಹ ಪತ್ತೆಯಾಗಿದ್ದ ಸ್ಥಳಕ್ಕೆ ಶನಿವಾರ ಭೇಟಿದ್ದಾರೆ.
ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಸಮೀಪ ಮಣ್ಣಸಂಕದಲ್ಲಿ ಸೌಜನ್ಯಾ ನಾಪತ್ತೆಯಾದ ಸ್ಥಳ ಹಾಗೂ ಬಳಿಕ ಆಕೆಯ ಮೃತದೇಹ ಪತ್ತೆಯಾಗಿರುವ ಸ್ಥಳಕ್ಕೆ ಇಂದು ಭೇಟಿ ನೀಡಿರುವ ಎಸ್ಐಟಿ ಅಧಿಕಾರಿಗಳು ಸ್ಥಳ ಮಹಜರು ಪ್ರಕ್ರಿಯೆ ಆರಂಭಿಸಿದ್ದಾರೆ.
ಈ ಸಂದರ್ಭದಲ್ಲಿ ಎಸ್ಐಟಿ ತನಿಖಾಧಿಕಾರಿ ಐಪಿಎಸ್ ಅಧಿಕಾರಿ ಲೋಕೇಶ್ ಜಗಲಾಸರ್, ಎಸಿಪಿ ಮನೋಜ್ ಕುಮಾರ್ ಸೇರಿದಂತೆ ಬೆಂಗಳೂರು FSL ತಂಡ, ಸೋಕೋ ತಂಡ, ವೈದ್ಯರ ತಂಡ, ಗ್ರಾಮ ಆಡಳಿತಾಧಿಕಾರಿ, PWD ಇಂಜಿನಿಯರ್ ಜೊತೆಗಿದ್ದಾರೆ.
ಅಂದು ಸೌಜನ್ಯಾಳ ಮೃತದೇಹ ಸಿಕ್ಕಾಗ ದೂರು ನೀಡಿದ್ದ ಸೌಜನ್ಯಾಳ ಮಾವ ಪುರಂದರ ಗೌಡ ಹಾಗೂ ಪಂಚರು ಉಪಸ್ಥಿತರಿದ್ದಾರೆ.
2012ರ ಅಕ್ಟೋಬರ್ 9ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 17 ವರ್ಷದ ಬಾಲಕಿ ಸೌಜನ್ಯಾಳನ್ನು ಅತ್ಯಾಚಾರಗೈದು ಕೊಲೆಗೈಯಲಾಗಿತ್ತು. ಈ ಪ್ರಕರಣದ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ಸೂಚಿಸಿದೆ. ಎಸ್ಐಟಿ ರಚಿಸಿ, ಮೂರು ತಿಂಗಳೊಳಗೆ ಅನುಸರಣೆ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿದೆ.