×
Ad

ಧರ್ಮಸ್ಥಳ : ಅ.27 ರಂದು ಎಸ್‌ಐಟಿ ವಿಚಾರಣೆಗೆ ಹಾಜರಾಗಲು ತಿಮರೋಡಿ, ಮಟ್ಟಣ್ಣನವರ್ ಸಹಿತ ನಾಲ್ವರಿಗೆ ನೋಟಿಸ್

Update: 2025-10-25 13:18 IST

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ವಿಚಾರಣೆಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ನಾಲ್ಕು ಮಂದಿಗೆ  ಎಸ್.ಐ.ಟಿ ನೋಟಿಸ್ ಜಾರಿ ಮಾಡಿದೆ.

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಅ.27 ರಂದು ಸೋಮವಾರ 10 :30 ಕ್ಕೆ ವಿಚಾರಣೆಗೆ ಹಾಜರಾಗಲು ಸೌಜನ್ಯ ಪರ ಹೋರಾಟದ ನೇತೃತ್ವ ವಹಿಸಿರುವ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ್ ಗೌಡ ಎಂಬವರಿಗೆ ಅ.24 ರಂದು ನೋಟಿಸ್ ಜಾರಿ ಮಾಡಲಾಗಿದೆ.

ಸೋಮವಾರ ವಿಚಾರಣೆಗೆ ಹಾಜರಾಗದಿದ್ದಲ್ಲಿ BNS 35(3) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ನೋಟೀಸ್ ನಲ್ಲಿ ತಿಳಿಸಲಾಗಿದೆ.

ಸಾಕ್ಷಿ ದೂರು ದಾರನಾಗಿ ಬಂದ ಚಿನ್ನಯ್ಯ ತಂದಿದ್ದ ಬುರುಡೆಗೆ ಸಂಬಂಧಿಸಿದಂತೆ ಇವರ ವಿಚಾರಣೆ ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು ಇದೀಗ ಮತ್ತೆ ಹಾಜರಾಗಲು ತಿಳಿಸಿದ್ದಾರೆ.

ಸೋಮವಾರ ಸೌಜನ್ಯ ಪರ ಹೋರಾಟಗಾರರು ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ ಸಲ್ಲಿಸುವ ಕಾರ್ಯಕ್ರಮ ಇಟ್ಟುಕೊಂಡಿದ್ದು ಇದೇ ದಿನ ಇವರಿಗೆ ಹಾಜರಾಗುವಂತೆ ನೋಟೀಸ್ ನೀಡಿರುವುದು ಕುತೂಹಲ ಮೂಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News