ಮೇ 30ರಂದು ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಸಂಚಿಕೆ ಬಿಡುಗಡೆ
Update: 2024-05-29 22:58 IST
ಮಂಗಳೂರು, ಮೇ 29: ಮಂಗಳೂರು ಪ್ರೆಸ್ ಕ್ಲಬ್‌ನ ಗೃಹ ಪತ್ರಿಕೆ ‘ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ‘ ಇ-ಪೇಪರ್’ಇದರ ದ್ವಿತೀಯ ಸಂಚಿಕೆಯ ಬಿಡುಗಡೆ ಸಮಾರಂಭ ಮೇ 30ರಂದು ಬೆಳಗ್ಗೆ 11ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ. ತುಳು ಸಾಹಿತ್ಯಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಬಿಡುಗಡೆಗೊಳಿಸಲಿದ್ದಾರೆ.
ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತು ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ.ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್‌ನ ಪ್ರಕಟನೆ ತಿಳಿಸಿದೆ.