ಜೂ.14-15: ದ.ಕ. ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ
Update: 2025-06-13 20:02 IST
ಮಂಗಳೂರು, ಜೂ.13: ದ.ಕ.ಜಿಲ್ಲೆಯಲ್ಲಿ ಶುಕ್ರವಾರವೂ ಮಳೆಯಾಗಿದ್ದು, ಮುಂದಿನ ಎರಡು ದಿನಗಳ ಕಾಲ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ.
ಶುಕ್ರವಾರ ಮುಂಜಾನೆಯಿಂದಲೇ ಉತ್ತಮ ಮಳೆಯಾಗಿದೆ. ಹಗಲಿಡೀ ಮೋಡ ಕವಿದ ವಾತಾವರಣದ ನಡುವೆ ಮಳೆ ಸುರಿದಿದೆ. ಅಪರಾಹ್ನದ ವೇಳೆ ಕೆಲಕಾಲ ಬಿಸಿಲು ಕಾಣಿಸಿತ್ತು.
ಗುರುವಾರ ಬೆಳಗ್ಗಿನಿಂದ ಶುಕ್ರವಾರ ಬೆಳಗ್ಗಿನವರೆಗೆ ಜಿಲ್ಲೆಯಲ್ಲಿ 4 ಮನೆಗಳಿಗೆ ಭಾಗಶಃ ಮತ್ತು 40 ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.