ಕುತ್ತಾರು | ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ಹರಿದ ಕಾರು ಪಲ್ಟಿ: ಓರ್ವನಿಗೆ ಗಾಯ
Update: 2023-07-09 09:54 IST
ಉಳ್ಳಾಲ, ಜು.9: ತೊಕ್ಕೊಟ್ಟು ಸಮೀಪದ ಕುತ್ತಾರು ಪಂಡಿತ್ ಹೌಸ್ ಎಂಬಲ್ಲಿ ಇಂದು ಮುಂಜಾನೆ ಕಾರೊಂದು ಅಪಘಾತಕ್ಕೀಡಾಗಿ ಓರ್ವ ವೈದ್ಯಕೀಯ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ.
ಬೆಳಗ್ಗಿನ ಜಾವ 3:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ವೇಗವಾಗಿದ್ದ ಕಾರು ಹರಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಇದರಿಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಉರುಳಿಬಿದ್ದಿದ್ದು, ಸಂಪೂರ್ಣ ಜಖಂಗೊಂಡಿದೆ. ಘಟನೆಯಿಂದ ಮೂರು ದನಗಳು ಸಾವಿಗೀಡಾಗಿವೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಕಾರು ಚಾಲಕ ವೈದ್ಯಕೀಯ ವಿದ್ಯಾರ್ಥಿ ಮೈಸೂರು ಮೂಲದ ಡಾ.ವಿವೇಕ್ ಶಶಿಕುಮಾರ್ ಎಂಬವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕಾರು ದೇರಳಕಟ್ಟೆ ಕಡೆಯಿಂದ ತೊಕ್ಕೊಟ್ಟಿನತ್ತ ಸಂಚರಿಸುತ್ತಿತ್ತು ಎಂದು ಹೇಳಲಾಗಿದೆ.