×
Ad

ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರ ಮೃತ್ಯು ಪ್ರಕರಣ: NHAIಗೆ ನೋಟಿಸ್ ನೀಡಿ ಕ್ರಮ: ಕುಲದೀಪ್ ಆರ್. ಜೈನ್

Update: 2023-07-19 13:44 IST

ಮಂಗಳೂರು, ಜು.19: ಬೈಕಂಪಾಡಿಯಲ್ಲಿ ಮಂಗಳವಾರ ರಸ್ತೆಯಲ್ಲಿದ್ದ ಹೊಂಡ ತಪ್ಪಿಸುವ ಯತ್ನದ ವೇಳೆ ದ್ವಿಚಕ್ರ ವಾಹನ ಸವಾರ ಲಾರಿಯಡಿಗೆ ಬಿದ್ದು ಮೃತಪಟ್ಟ ಘಟನೆಗೆ ಸಂಬಂಧಿಸಿ ತನಿಖೆಗೆ ಮುಂದಾಗಿರುವ ಮಂಗಳೂರು ಪೊಲೀಸರು, ಈ ಬಗ್ಗೆ ಎನ್ಎಚ್ಎಐಗೆ ನೋಟಿಸ್ ನೀಡಿ ಮುಂದಿನ ಕ್ರಮ ವಹಿಸಲು ನಿರ್ಧರಿಸಿದ್ದಾರೆ.

ಅಸಮರ್ಪಕ ರಸ್ತೆಗಳಿಂದಾಗಿ ಮೃತಪಟ್ಟ ಈ ಹಿಂದಿನ ಘಟನೆಗಳನ್ನು ಉಲ್ಲೇಖಿಸಿ ನ್ಯಾಯಾಲಯಗಳು ನೀಡಿರುವ ತೀರ್ಪಿನ ಆಧಾರದಲ್ಲಿ ಮಂಗಳೂರು ಪೊಲೀಸರು ಮಂಗಳವಾರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿರುವ ಘಟನೆ ಬಗ್ಗೆ ಕ್ರಮಕ್ಕೆ ಮುಂದಾಗಿದ್ದಾರೆ.

ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಆರ್. ಜೈನ್, ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ, ಎನ್ಎಚ್ಎಐಗೆ ನೋಟಿಸ್ ನೀಡುವ ಹಾಗೂ ಮುಂದಿನ ಕ್ರಮ ಕೈಗೊಳ್ಳುವುದಾ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News