×
Ad

ಅಡ್ಯಾರ್ : ಬೆಂಕಿ ಆಕಸ್ಮಿಕ; ಹೆದ್ದಾರಿ ಮಧ್ಯೆ ಹೊತ್ತಿ ಉರಿದ ಕಾರು ಸಂಪೂರ್ಣ ಭಸ್ಮ

Update: 2024-09-28 13:27 IST

ಮಂಗಳೂರು: ಹೆದ್ದಾರಿ ಮಧ್ಯೆ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ನಡೆದಿದೆ.

ಶಾರ್ಟ್‌ ಸರ್ಕ್ಯೂಟ್‌ ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದಿದ್ದಾನೆ ಎಂದು ತಿಳಿದು ಬಂದಿದೆ.

ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಅರ್ಧಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ಸಂಪೂರ್ಣ ಭಸ್ಮವಾಗಿದೆ. ಆದರೆ ಈ ವರೆಗೂ ಸ್ಥಳಕ್ಕೆ ಯಾವುದೇ ಅಗ್ನಿಶಾಮಕ ದಳದವರು ಆಗಮಿಸಿಲ್ಲ ಎನ್ನಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News