ಅಶೋಕ್ ರೈ - ಯುಟಿ ಖಾದರ್ 

ಮಂಗಳೂರು, ಸೆ.2: ಕೆಆರ್‌ಐಡಿಎಲ್ ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯ್ ಹಾಗೂ ಕಿರಿಯ ಇಂಜಿನಿಯರ್ ಪ್ರಜ್ವಲ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರ ಮತ್ತು ನನ್ನ ಹೆಸರು ಪ್ರಸ್ತಾಪಿಸಿ ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಇಬ್ಬರನ್ನೂ ಅಮಾನತಿನಲ್ಲಿಟ್ಟು ಸೂಕ್ತ ತನಿಖೆ ನಡೆಸಬೇಕು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.

ಕೆಆರ್‌ಐಡಿಎಲ್ ಸಂಸ್ಥೆಯ ವತಿಯಿಂದ ನಿರ್ವಹಿಸಲಾಗುತ್ತಿರುವ ಸರಕಾರಿ ಕಾಮಗಾರಿಗಳಿಗೆ ಸಾಮಗ್ರಿ ಪೂರೈಸುವ ಗ್ರೂಪ್ ಲೀಡರ್‌ಗಳಿಂದ ಇಲಾಖಾ ಸಚಿವರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೊಡುವುದಕ್ಕಾಗಿ ಈ ಇಬ್ಬರು ಇಂಜಿನಿಯರುಗಳು ಹಣ ಪಡೆಯುತ್ತಿರುವ ಆರೋಪವಿದೆ.

ಈ ಆರೋಪಗಳ ಕುರಿತು ಶಾಸಕ ಅಶೋಕ್ ಕುಮಾರ್ ರೈ ಪ್ರಸ್ತಾಪಿಸಿದ್ದಾರೆ. ಇದೊಂದು ಗಂಭೀರ ಸ್ವರೂಪದ ಆರೋಪವಾಗಿದೆ. ಹಾಗಾಗಿ ತಕ್ಷಣ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಈ ಇಬ್ಬರು ಇಂಜಿನಿರ್‌ಗಳನ್ನು ಅಮಾನತ್ತಿನಲ್ಲಿರಿಸಿ ತನಿಖೆ ನಡೆಸಬೇಕು. ಆರೋಪ ಸಾಬೀತಾದಲ್ಲಿ ಸಂಬಂಧಪಟ್ಟವರ ಮೇಲೆ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಖಾದರ್ ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor