Mangaluru | ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ವೆಲೆನ್ಸಿಯಾ ಚರ್ಚ್ ಪಾದ್ರಿ ಮತ್ತೆ ಬಂಧನ
ಮಂಗಳೂರು : ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವೆಲೆನ್ಸಿಯಾ ಚರ್ಚ್ ಧರ್ಮಗುರು ಸಿಪ್ರಿಯನ್ ಪಿಂಟೊ ನನ್ನು ಮತ್ತೆ ಬಂಧಿಸಲಾಗಿದೆ.
ಪೆರ್ಮನ್ನೂರು ಚರ್ಚ್‌ನಲ್ಲಿ ಪಾದ್ರಿಯಾಗಿದ್ದ ಸಂದರ್ಭ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯವು ಡಿ.2ರ ತನಕ ನ್ಯಾಯಾಂಗ ಬಂಧನ ವಿಧಿಸಿದೆ.
ವೆಲೆನ್ಸಿಯಾ ಚರ್ಚ್‌ನಲ್ಲಿ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಲ್ಲಿ ಕೆಲವು ದಿನಗಳ ಹಿಂದೆ ಬಂಧನಕ್ಕೊಳಗಾಗಿ ನ್ಯಾಯಾಲಯ ಪಾದ್ರಿಗೆ ಜಾಮೀನು ನೀಡಿತ್ತು.