×
Ad

ಅಮೃತ್ ಭಾರತ್ ಸ್ಟೇಷನ್ ಯೋಜನೆ: ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ

Update: 2023-08-06 11:49 IST

ಮಂಗಳೂರು, ಆ.6: ಮಂಗಳೂರು ಜಂಕ್ಷನ್ (ಕಂಕನಾಡಿ) ರೈಲು ನಿಲ್ದಾಣವನ್ನು ಕೇಂದ್ರ ಸರಕಾರದ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ  ರೂ.19.32 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ  ಕಾಮಗಾರಿಗೆ ರವಿವಾರ ಚಾಲನೆ ನೀಡಲಾಯಿತು.

ಹೊಸದಿಲ್ಲಿಯಿಂದ ವಿಡಿಯೋ ಕಾನ್ಫೆರೆನ್ಸ್(ವರ್ಚುವಲ್) ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿದರು. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ವಾಗತಿಸಿದರು.

ಈ ಪ್ರಯುಕ್ತ ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಆವರಣದಲ್ಲಿ ನಡೆದ ಸಮಾರಂಭವನ್ನು ಸಂಸದ ನಳಿನ್ ಕುಮಾರ್ ಕಟೀಲು ಜ್ಯೋತಿ ಬೆಳಗಿಸಿ ಉದ್ಘಾಟಿದರು.

ಬಳಿಕ ಮಾತನಾಡಿದ ಅವರು, ಕಳೆದ 9 ವರ್ಷಗಳಲ್ಲಿ ರೈಲು ಅಭಿವೃದ್ಧಿಗೆ ಮಂಗಳೂರಿಗೆ ಅತಿ ಹೆಚ್ವು ಅನುದಾನ ಲಭಿಸಿದೆ. ಮಂಗಳೂರು ಜಂಕ್ಷನ್ ಅಂತರ್ ರಾಷ್ಟ್ರೀಯ ದರ್ಜೆಯ ಉನ್ನತ ಮಟ್ಟದ ರೈಲು ನಿಲ್ದಾಣವಾಗಿ ಅಭಿವೃದ್ಧಿ ಯಾಗಲಿದೆ. ಮಂಗಳೂರು ರೈಲು ನಿಲ್ದಾಣದ ಜೊತೆಗೆ ಬಂಟ್ವಾಳ ಮತ್ತು ಸುಬ್ರಹ್ಮಣ್ಯದ ರೈಲು ನಿಲ್ದಾಣ ಕೂಡಾ ಅಭಿವೃದ್ಧಿ ಯಾಗಲಿದೆ ಎಂದು ತಿಳಿಸಿದರು.

ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ , ಸುಳ್ಯ ಶಾಸಕಿ ಭಾಗೀರಥಿ, ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪ್ ಸಿಂಹ ನಾಯಕ್ , ಮಂಗಳೂರು ಮನಪಾ ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಸ್ಥಳೀಯ ಕಾರ್ಪೊರೇಟರ್ ಶೋಭಾ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯನಿರ್ವಾಹಣಾಧಿಕಾರಿ ರಾಜಗೋಪಾಲ ಸ್ವಾಗತಿಸಿದರು.

ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಮಂಗಳೂರು ಜಂಕ್ಷನ್(ಕಂಕನಾಡಿ), ಧಾರವಾಡ, ಬಳ್ಳಾರಿ, ಕಲಬುರಗಿ, ಗದಗ, ಕೊಪ್ಪಳ, ಬಳ್ಳಾರಿ, ಹಾಸನದ ಅರಸೀಕೆರೆ, ಹರಿಹರ, ಗೋಕಾಕ್ ಸೇರಿದಂತೆ ರಾಜ್ಯದ 13 ಹಾಗೂ ದೇಶದ ಒಟ್ಟು 508 ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸುವ ಯೋಜನೆಗೆ ಇಂದು ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News