ಬೆಳ್ತಂಗಡಿ; ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟ; ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ
Update: 2024-01-28 18:51 IST
ಬೆಳ್ತಂಗಡಿ: ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟಗೊಂಡು ಕನಿಷ್ಠ ಇಬ್ಬರು ಮೃತಪಟ್ಟಿರುವ ಘಟನೆ ರವಿವಾರ ವರದಿಯಾಗಿದೆ. ಸ್ಫೋಟದ ತೀವ್ರತೆಗೆ ದೇಹಗಳು ಚಿದ್ರಗೊಂಡಿದೆ ಎನ್ನಲಾಗಿದೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ವೇಣೂರು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಅಗ್ನಿ ಶಾಮಕ ಮತ್ತು ತುರ್ತು ಸೇವೆ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.