Mangaluru | ಎಂಡಿಎಂಎ ಮಾರಾಟಕ್ಕೆ ಯತ್ನ : ಆರೋಪಿ ಸೆರೆ
Update: 2025-12-08 23:05 IST
ಸಾಂದರ್ಭಿಕ ಚಿತ್ರ
ಮಂಗಳೂರು: ನಗರದ ಕೆಪಿಟಿ ಬಳಿಯ ಆರ್‌ಟಿಒ ಫಿಟ್ನೆಸ್ ಪರಿಶೀಲನ ಮೈದಾನಕ್ಕೆ ತೆರಳುವ ರಸ್ತೆ ಬದಿ ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಡಿ ಸುರತ್ಕಲ್ ಕೃಷ್ಣಾಪುರ ಮುಹಮ್ಮದ್ ಆರೀಫ್ ಫೈಝಲ್ (26)ಎಂಬಾತನನ್ನು ಕದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯಿಂದ 2.05 ಗ್ರಾಂ ತೂಕದ 10,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ 80 ಸಾವಿರ ರೂ. ಮೌಲ್ಯದ ದ್ವಿಚಕ್ರ ವಾಹನ ಮತ್ತು 2 ಸಾವಿರ ರೂ. ನಗದು ಜಪ್ತಿ ಮಾಡಲಾಗಿದೆ.