×
Ad

ಕೋಟೆಕಾರ್ ಸಹಕಾರಿ ಸಂಘದಲ್ಲಿ ದರೋಡೆ ಹಿನ್ನೆಲೆ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಭೆ

Update: 2025-01-17 15:58 IST

ದರೋಡೆ ನಡೆದಿರುವ ಕೆ.ಸಿ.ರೋಡಿನ ಕೋಟೆಕಾರ್ ಸಹಕಾರಿ ಸಂಘದ ಕಚೇರಿ

ಮಂಗಳೂರು ಜ.17: ತಲಪಾಡಿ ಕೆ.ಸಿ.ರೋಡಿನಲ್ಲಿರುವ ಕೋಟೆಕಾರ್ ಸಹಕಾರಿ ಸಂಘದಲ್ಲಿ ದರೋಡೆ ನಡೆದಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಪಿಗಳ ಶೀಘ್ರ ಪತ್ತೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ವಲಯ ಐಜಿ ಅಮಿತ್, ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಎಸ್ಪಿ ಯತೀಶ್, ಡಿವೈಎಸ್ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಮುಖ್ಯಮಂತ್ರಿ, ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ? ಎಷ್ಟು ಟೋಲ್ ಗೇಟ್ ಗಳನ್ನು ದಾಟಿ ಹೋಗಿದ್ದಾರೆ? ಟೋಲ್ ಗೇಟ್ ಗಳಲ್ಲಿ ಬಿಗಿ ಭದ್ರತೆ ಕೈಗೊಂಡಿಲ್ಲ ಯಾಕೆ ಎಂದು ಪ್ರಶ್ನಿಸಿದರು.

ಸಹಕಾರಿ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗೆ ಮಾಹಿತಿ ನೀಡಿದರು.

ಎಲ್ಲಾ ಟೋಲ್ ಗೇಟ್ ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಿ ಎಂದು ಮುಖ್ಯಮಂತ್ರಿ ಸೂಚನೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News