×
Ad

ಬಜ್ಪೆ | ಪಟಾಕಿ ಅಂಗಡಿಗಳಿಂದ ಸುಲಿಗೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Update: 2025-10-24 12:06 IST

ಬಜ್ಪೆ: ಪಟಾಕಿ ಅಂಗಡಿಗಳ ಮಾಲಕರಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿರುವ ಆರೋಪದಲ್ಲಿ ಇಬ್ಬರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುರತ್ಕಲ್ ಮಂಗಳಪೇಟೆಯ ಫಾಝಿಲ್ ಕೊಲೆ ಆರೋಪಿ, ರೌಡಿ ಶೀಟರ್ ಪ್ರಶಾಂತ್ ಯಾನೆ ಪಚ್ಚು ಮತ್ತು ಅಶ್ವಿತ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.

ಆರೋಪಿಗಳು ಬಜ್ಪೆಯ ಪಟಾಕಿ ಮಾರಾಟ ಮಳಿಗೆಗಳಿಗೆ ತೆರಳಿ ಹಣ ಕೊಡುವುದಿಲ್ಲ, ಆದರೆ ಎಲ್ಲರೂ ಪಟಾಕಿ ಕೊಡಲೇಬೇಕು ಎಂದು ಬೆದರಿಸಿ ಸುಲಿಗೆ ಮಾಡಿದ್ದಾರೆ.

ಈ ಘಟನೆ ಅ.22ರಂದು ನಡೆದಿದ್ದು, ಪಟಾಕಿ ಅಂಗಡಿಗಳ ಮಾಲಕರು ಹೆದರಿ ಪೊಲೀಸ್ ದೂರು ನೀಡಲು ಹಿಂದೇಟು ಹಾಕಿದ್ದರು.

ಇತ್ತೀಚೆಗೆ ವಿಚಾರ ತಿಳಿದು ಪೊಲೀಸರು ರಕ್ಷಣೆ ನೀಡುವ ಭರವಸೆ ನೀಡಿದ ಬಳಿಕ ಪಟಾಕಿ ಅಂಗಡಿಯೊಂದರ ಮಾಲಕ ದಾಮೋದರ ಎಂಬವರು ಬಜ್ಪೆ ಪೊಲೀಸ್ ಠಾಣೆಯಲ್ಲಿ ಗುರುವಾರ ರಾತ್ರಿ ದೂರು ದಾಖಲಿಸಿದ್ದರು.

ಈ ದೂರನ್ನು ಆಧರಿಸಿ ಪ್ರಕರಣ ದಾಖಲಿಕೊಂಡಿರುವ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ. ರೌಡಿ ಶೀಟರ್ ಪ್ರಶಾಂತ್ ಇತ್ತೀಚೆಗೆ ಕೊಲೆಯಾದ ರೌಡಿ ಶೀಟರ್ ಸುಹಾಸ್ ಶೆಟ್ಟಿಯ ಆಪ್ತ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News