×
Ad

ಬಂಟ್ವಾಳ | ಪತಿ, ಗರ್ಭಿಣಿ ಪತ್ನಿಯ ಮೃತದೇಹಗಳು ಮನೆಯಲ್ಲಿ ಪತ್ತೆ

Update: 2025-06-19 12:16 IST

ಬಂಟ್ವಾಳ: ಪತಿ ಮತ್ತು ಗರ್ಭಿಣಿ ಪತ್ನಿಯ ಮೃತದೇಹಗಳು ಅವರ ವಾಸವಿದ್ದ ಮನೆಯಲ್ಲಿ ಪತ್ತೆಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಡಗುಂಡಿ ಎಂಬಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಪತಿಯ ಮೃತದೇಹ ಆತ್ಮಹತ್ಯೆಗೈದ ಸ್ಥಿತಿಯಲ್ಲಿದ್ದರೆ, ಪತ್ನಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.

ಬಡಗುಂಡಿ ನಿವಾಸಿ ತಿಮ್ಮಪ್ಪ ಮೂಲ್ಯ (50) ಹಾಗೂ ಅವರ ಪತ್ನಿ ಜಯಂತಿ (40) ಮೃತಪಟ್ಟವರು.

ಜಯಂತಿಯವರ ಮೃತದೇಹ ಕೋಣೆಯಲ್ಲಿ ಮಲಗಿದ ಸ್ಥಿತಿಯಲ್ಲಿದ್ದರೆ, ತಿಮ್ಮಪ್ಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಕಂಡು ಬಂದಿದೆ.

ತಿಮ್ಮಪ್ಪರ ಮನೆ ಮಿತ್ತಮಜಲಿನಲ್ಲಿದ್ದು, ಜಯಂತಿಯ ಮನೆ ಬಡಗುಂಡಿಯಲ್ಲಿದೆ. ಇವರಿಗೆ 15 ವರ್ಷಗಳ ಹಿಂದೆ ಮದುವೆಯಾಗಿದ್ದು, ಈವರೆಗೆ ಮಕ್ಕಳಾಗಿರಲಿಲ್ಲ. ಸದ್ಯ ಜಯಂತಿ ಗರ್ಭಿಣಿಯಾಗಿದ್ದು, ಜು.2ರಂದು ಸೀಮಂತ ನಡೆಸಲು ದಿನಾಂಕ ನಿಗದಿಯಾಗಿತ್ತು ಎನ್ನಲಾಗಿದೆ.

ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಭೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡು ತನಿಖೆ ಮುಂದುವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News