×
Ad

ಬಂಟ್ವಾಳ: ಪೂರ್ವಾನುಮತಿ ಪಡೆಯದೆ ಕಾರ್ಯಕ್ರಮದಲ್ಲಿ ಕರ್ಕಶ ಡಿಜೆ ಬಳಕೆ; ಪ್ರಕರಣ ದಾಖలు

Update: 2025-11-25 00:22 IST

ಸಾಂದರ್ಭಿಕ ಚಿತ್ರ (Grok)

ಬಂಟ್ವಾಳ: ಪೊಲೀಸ್ ಇಲಾಖೆಯಿಂದ ಪೂರ್ವಾನುಮತಿ ಪಡೆಯದೆ ಮದುವೆ ಕಾರ್ಯಕ್ರಮದಲ್ಲಿ ಕರ್ಕಶ ಡಿಜೆ ಬಳಸಿದ್ದಾರೆನ್ನಲಾದ ಘಟನೆ ಬಂಟ್ವಾಳ-ಭಂಡಾರಿಬೆಟ್ಟು ಎಂಬಲ್ಲಿ ಶನಿವಾರ ರಾತ್ರಿ ನಡೆದಿದ್ದು, ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಂಡಾರಿಬೆಟ್ಟು ಎಂಬಲ್ಲಿ ನಿಗದಿತ ಪ್ರಮಾಣಕ್ಕಿಂತ ಅಧಿಕವಾಗಿ ಹಾಗೂ ಕರ್ಕಶವಾಗಿ ಸಾರ್ವಜನಿಕ ಶಾಂತಿ ನೆಮ್ಮದಿಗೆ ತೊಂದರೆಯಾಗುವಂತೆ ಧ್ವನಿವರ್ಧಕ ಬಳಸುತ್ತಿರುವ ಬಗ್ಗೆ ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ, ಸದ್ರಿ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮದುವೆ ಕಾರ್ಯಕ್ರಮದಲ್ಲಿ ಯಾವುದೇ ಪೂರ್ವಾನುಮತಿ ಪಡೆಯದೇ ಕರ್ಕಶವಾಗಿ ಡಿ.ಜೆ. ಧ್ವನಿವರ್ಧಕ ಬಳಸುತ್ತಿರುವುದು ಕಂಡು ಬಂದಿದೆ.

ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News