×
Ad

Bantwal | ಅಕ್ರಮ ಗೋಹತ್ಯೆ ಪ್ರಕರಣ: ಆರೋಪಿ ಮನೆ, ದನದ ಕೊಟ್ಟಿಗೆ ಜಪ್ತಿ

Update: 2026-06-08 23:20 IST

ಬಂಟ್ವಾಳ: ಅಕ್ರಮ ಗೋಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಜಿಪಮೂಡ ಗ್ರಾಮದ ಕೊಳಕೆ–ಪಂಜಾಜೆ ಪ್ರದೇಶದಲ್ಲಿರುವ ಆರೋಪಿಯ ಮನೆ ಹಾಗೂ ದನದ ಕೊಟ್ಟಿಗೆಯನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 68/2026, ಕಲಂ 4,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020 ಪ್ರಕರಣದಲ್ಲಿ ಕೃತ್ಯ ನಡೆದ ಸ್ಥಳವಾದ ಸಜಿಪಮೂಡ ಗ್ರಾಮದ ಕೊಳಕೆ ಪಂಜಾಜೆ ಎಂಬಲ್ಲಿ ಪ್ರಕರಣದ ಆರೋಪಿ ಮುಸ್ತಫಾಗೆ ಸೇರಿದ ಮನೆ ಹಾಗೂ ದನದ ಕೊಟ್ಟಿಗೆಗಳನ್ನು ಕಲಂ 8(1) ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020’ ರಂತೆ ಪೊಲೀಸರು ಜಪ್ತಿ ಮಾಡಿದ್ದು, ಮುಂದಿನ ಕ್ರಮಕ್ಕಾಗಿ ಮಂಗಳೂರು ಉಪ ವಿಭಾಗೀಯ ದಂಡಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News