×
Ad

BANTWAL |ಬಿ.ಸಿ.ರೋಡ್ ವೃತ್ತಕ್ಕೆ ಕಾರು ಢಿಕ್ಕಿ : ಇಬ್ಬರು ಸ್ಥಳದಲ್ಲೇ ಮೃತ್ಯು, ಐವರಿಗೆ ಗಾಯ

Update: 2025-11-15 07:47 IST

ಬಂಟ್ವಾಳ : ಇನ್ನೋವಾ ಕಾರೊಂದು ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ ಮುಂಜಾನೆ 5ರ ವೇಳೆಗೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ನೇರವಾಗಿ ಢಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ, ರಸ್ತೆಯಲ್ಲಿದ್ದ ವಾಹನವನ್ನು ತೆರವುಗೊಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News