ಬಿ.ಸಿ.ರೋಡ್ ನಲ್ಲಿ ಯುವತಿ ಹತ್ಯೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ

Update: 2026-07-17 11:26 IST

ಮೃತ ಲಾವಣ್ಯ | ಆರೋಪಿ ಚೇತನ್‌

ಬಂಟ್ವಾಳ: ಬಿ.ಸಿ.ರೋಡಿನ KSRTC ಬಸ್ ನಿಲ್ದಾಣದ ಬಳಿ ಲಾವಣ್ಯ ಎಂಬ ಯುವತಿಯನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆಗೈದು ಪರಾರಿಯಾಗಿದ್ದ ಆರೋಪಿ ಚೇತನ್‌ನನ್ನು ಬಂಟ್ವಾಳ ಪೊಲೀಸರು ಬಂಧಿಸಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.

ಬಂಟ್ವಾಳ ಪೊಲೀಸರು ಸಿಸಿಬಿ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಶುಕ್ರವಾರ ಬೆಳಗ್ಗೆ ಮಂಗಳೂರು ಹೊರವಲಯದ ಪಚ್ಚನಾಡಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಈ ಬಗ್ಗೆ ಪೊಲೀಸರು ಅಧಿಕೃತ ಮಾಹಿತಿಯನ್ನು ಇನ್ನಷ್ಟೇ ನೀಡಬೇಕಿದೆ.

ಕಕ್ಯಪದವು ನಿವಾಸಿ ಲಾವಣ್ಯ (21) ಎಂಬಾಕೆಯನ್ನು ಗುರುವಾರ ಸಂಜೆ ಬೆಳ್ತಂಗಡಿ ತಾಲೂಕಿನ ಓಡಿಲ್ನಾಲ ನಿವಾಸಿ ಚೇತನ್‌ ಬಿಸಿರೋಡಿನ KSRTC ಬಸ್ ನಿಲ್ದಾಣದ ಬಳಿ ಮಾರಕಾಸ್ತ್ರದಿಂದ ಕಡಿದು ಕೊಲೆ ಮಾಡಿ ಪರಾರಿಯಾಗಿದ್ದ. ಘಟನೆಯ ಬಳಿಕ ದಕ್ಷಿಣ ಕನ್ನಡ ಎಸ್‌ಪಿ ಅವರು ಆರೋಪಿಯ ಬಂಧನಕ್ಕಾಗಿ 3 ವಿಶೇಷ ತಂಡಗಳ ಮೂಲಕ ಕಾರ್ಯಾಚರಣೆ ಆರಂಭಿಸಿದ್ದರು. ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿ ಬಂಟ್ವಾಳ ಮತ್ತು ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News