×
Ad

ಬಿ.ಎಡ್ ಪ್ರವೇಶ: ಮೂಲ ದಾಖಲೆಗಳ ಪರಿಶೀಲನೆಗೆ ಸೂಚನೆ

Update: 2025-11-03 18:57 IST

ಸಾಂದರ್ಭಿಕ ಚಿತ್ರ | PC : gemini AI

ಮಂಗಳೂರು : ಬಿ.ಇಡಿ 2025-26ನೇ ಸಾಲಿನ ದಾಖಲಾತಿಗೆ ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಕಾರ್ಯವು ತಮ್ಮ ವ್ಯಾಪ್ತಿಯ ನೋಡಲ್ ಕೇಂದ್ರಗಳಲ್ಲಿ ನಡೆಯುತ್ತಿದ್ದು, ನ.3ರಂದು ಬಿ.ಇಡಿ ದಾಖಲಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.

ಅರ್ಜಿ ಸಲ್ಲಿಸಿದ 7ದಿನಗಳ ಒಳಗಾಗಿ ತಮ್ಮ ವ್ಯಾಪ್ತಿಯ ನೋಡಲ್ ಕೇಂದ್ರಕ್ಕೆ ಮೂಲ ದಾಖಲೆಗಳೊಂದಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದರೂ ಅನೇಕ ಮಂದಿ ತಮ್ಮ ದಾಖಲೆಗಳ ಪರಿಶೀಲನೆ ಮಾಡಿಸಿರುವುದಿಲ್ಲ. ದಾಖಲೆಗಳ ಪರಿಶೀಲನೆ ಮಾಡಿಸಿಕೊಳ್ಳದ ಅಭ್ಯರ್ಥಿಗಳನ್ನು 2025-26ನೇ ಸಾಲಿನ ಬಿ.ಇಡಿ ದಾಖಲಾತಿಗೆ ಪರಿಗಣಿಸುವುದಿಲ್ಲ ಎಂದು ಬೆಂಗಳೂರು ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News