ಬಿ.ಎಡ್ : ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಮಂಗಳೂರು,ಡಿ.3: ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜ್ಯುಕೇಶನ್ ನಿಂದ 2025-26ನೇ ಸಾಲಿನಲ್ಲಿ ಮಾನ್ಯತೆ ಪಡೆದಿರುವ ಸರಕಾರಿ/ಅರೆ ಸರಕಾರಿ /ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಮ್ , ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ 25000 ರೂ. ವಿಶೇಷ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಸಂಬಂಧಪಟ್ಟ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಡಿಬಿಟಿ ಮುಖಾಂತರ ಜಮಾ ಮಾಡಲಾಗುತ್ತದೆ. ಆಸಕ್ತ ಅಲ್ಪಸಂಖ್ಯಾತರ ಸಮುದಾಯದ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಲ್ಲಾ ದಾಖಲೆಗಳ ಸಹಿತ ಸೇವಾಸಿಂಧು ಪೋರ್ಟಲ್ (https://sevasindhuservices.karnataka.gov.in) ಮುಖಾಂತರ ಡಿ.31 ರವರೆಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್ಸೈಟ್ https://dom.karnataka.gov.in (ಸಹಾಯವಾಣಿ: 8277799990) ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಕ್ಕೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟನೆೆಯಲ್ಲಿ ತಿಳಿಸಿದ್ದಾರೆ.