×
Ad

ಬೆಳ್ಳಾರೆ | ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

Update: 2025-10-29 10:19 IST

ಸಾಂದರ್ಭಿಕ ಚಿತ್ರ

ಸುಳ್ಯ, ಅ.29: ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬೆಳ್ಳಾರೆ ಠಾಣಾ ಪೊಲೀಸರು ಪೊಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ.

ಗಿರಿಧರ ರೈ ಪಜಿಂಬಿಲ ಬಂಧಿತ ಆರೋಪಿ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿ ಗಿರಿಧರ ರೈ ಅ.26ರಂದು ಅಪರಾಹ್ನ 2 ಗಂಟೆ ಸುಮಾರಿಗೆ ಮುರುಳ್ಯ ಗ್ರಾಮದ ನಿಂತಿಕಲ್ಲು ಜಂಕ್ಷನ್ ನ ಬಸ್ ತಂಗುದಾಣದಲ್ಲಿ ಕುಳಿತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News