×
Ad

ಬೆಳ್ತಂಗಡಿ: ವಿದ್ಯುತ್‌ ತಗುಲಿ ಯುವಕ ಮೃತ್ಯು

Update: 2024-07-15 14:30 IST

ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾತಕ್ಕೆ ಬಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.

 ಹರೀಶ (32) ಮೃತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ತೆರಳಿ ಫ್ಯೂಸ್ ಹಾಕಲು ನೋಡಿದ ಸಂದರ್ಭ ವಿದ್ಯುತ್ ಪ್ರವಹಿಸಿ ಈತ ಮೃತಪಟ್ಟಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News