×
Ad

ಬೆಳ್ತಂಗಡಿ | ಆದಿವಾಸಿ ಕುಟುಂಬಗಳಿಗೆ ದೊರೆತ ವಿದ್ಯುತ್ ಭಾಗ್ಯ

Update: 2025-03-18 12:38 IST

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.27ರಂದು ನಡೆದ ಸಭೆಯಲ್ಲಿ ಆದಿವಾಸಿಗಳು ನೆಲೆಸಿರುವ ಅರಣ್ಯ ಪ್ರದೇಶದ ವಸತಿ ಪ್ರದೇಶಗಳಿಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತ ಪರಿಸರ ಸಚಿವ ಈಶ್ವರ್‌ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್ ಮಾರ್ಗ ಅಳವಡಿಕೆಗೆ ಅರಣ್ಯ ಭೂಮಿ ಪರಿವರ್ತನೆಗಾಗಿ ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಹಾಕಿಸಿ, ಅನುಮತಿ ಪಡೆಯಲು ಕ್ರಮ ವಹಿಸಿದ್ದರು. ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ್ದರು.

ಅಲ್ಲದೆ, ಬೆಳ್ತಂಗಡಿಯ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ ಅವರು ದೆಹಲಿಗೆ ತೆರಳಿ, ಕೇಂದ್ರ ಸರಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಇಲಾಖೆಗಳಿಗೆ ಹೋಗಿ ಶೀಘ್ರ ಅನುಮತಿ ದೊರಕಿಸಲು ಶ್ರಮಿಸಿದ್ದರು.

ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕ ಪಂಜಾಲ, ಮಾಳಿಗೆ ಬೈಲಿನ 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ. ಇಂದು ಈ ಸಂಬಂಧ ರಾಜ್ಯದ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ಈ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಅನುಮೋದನೆ ಲಭಿಸುವ ನಿರೀಕ್ಷೆ ಇದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News