×
Ad

ಬೆಳ್ತಂಗಡಿ: ಸವಾರರಿಬ್ಬರ ಸಹಿತ ನದಿ ನೀರಿನಲ್ಲಿ ಕೊಚ್ಚಿ ಹೋದ ಸ್ಕೂಟರ್

Update: 2025-06-16 12:37 IST

ಬೆಳ್ತಂಗಡಿ: ಯುವಕರಿಬ್ಬರು ಸ್ಕೂಟರ್ ಸಮೇತ ನದಿ ನೀರಿನಲ್ಲಿ ಕೊಚ್ಚಿ ಹೋಗಿ ಪವಾಡ ಸದೃಶ ರೀತಿಯಲ್ಲಿ ಬದುಕಿ ಉಳಿದ ಘಟನೆ ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ರವಿವಾರ ನಡೆದಿದೆ.

ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ ಪೂಜಾರಿ ಅಪಾಯದಿಂದ ಪಾರಾದ ಯುವಕರು.

ಇವರು ಕೆಲಸಕ್ಕೆ ಹೋಗುವಾಗ ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಪ್ರದೇಶವನ್ನು ಸಂಪರ್ಕಿಸುವ ಕೂಡುಜಾಲು ಎಂಬಲ್ಲಿ ಹರಿಯುತ್ತಿರುವ ನದಿಯನ್ನು ಸ್ಕೂಟರ್ ಸಮೇತ ದಾಟುತ್ತಿದ್ದರು. ಈ ವೇಳೆ ನದಿ ನೀರಿನಲ್ಲಿ ಕೊಚ್ಚಿ ಹೋದ ಇವರ ಸ್ಕೂಟರ್ ನದಿ ಬದಿಯಲ್ಲಿ ಅದೃಷ್ಟವಶಾತ್ ಸಿಲುಕಿಕೊಂಡಿದೆ ಎನ್ನಲಾಗಿದೆ.

ಕೂಡಲೇ ಯುವಕರಿಬ್ಬರು ಕೈಗೆ ಸಿಕ್ಕ ಯಾವುದೋ ಬಳ್ಳಿಯ ಸಹಾಯದಿಂದ ಸಿನಿಮೀಯ ರೀತಿಯಲ್ಲಿ ಪಾರಾಗಿ ಬದುಕುಳಿದಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News