×
Ad

ಬೆಳ್ತಂಗಡಿ : ಅಕ್ರಮ ಗೋ ಸಾಗಾಟ ಪ್ರಕರಣ; ಆರೋಪಿಯ ಮನೆ ಜಪ್ತಿ ಮಾಡಿದ ಧರ್ಮಸ್ಥಳ ಪೊಲೀಸರು

Update: 2025-11-05 11:30 IST

ಬೆಳ್ತಂಗಡಿ : ಗೋಮಾಂಸ ಮಾಡಲು ಮೂರು ದನಗಳನ್ನು ಅಕ್ರಮವಾಗಿ ಕಾರಿನಲ್ಲಿ ಸಾಗಾಟ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಇಬ್ಬರು ಆರೋಪಿಗಳಲ್ಲಿ ಒಬ್ಬನ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಲು ಹಾಕಿ ಜಪ್ತಿ ಮಾಡಿದ್ದಾರೆ.

ಧರ್ಮಸ್ಥಳ ಪೊಲೀಸರು ‌ನ.2 ರಂದು ಪಟ್ರಮೆ ಗ್ರಾಮದ ಪಟ್ಟೂರು ರಸ್ತೆಯಲ್ಲಿ ಗೋ ಮಾಂಸ ಮಾಡಲು ಅಕ್ರಮವಾಗಿ ಮೂರು ದನಗಳನ್ನು KA-19-MC-5862 ನಂಬರಿನ ರಿಟ್ಝ್ ಕಾರಿನಲ್ಲಿ ಸಾಗಾಟ ಮಾಡುವಾಗ ಉಳ್ಳಾಲ ತಾಲೂಕಿನ ಇಬ್ರಾಹೀಂ ಖಲೀಲ್‌ ಯಾನೆ ತೌಸೀಫ್ (38) ಮತ್ತು ಮಹಮ್ಮದ್ ಸಿನಾನ್(25) ಸಿಕ್ಕಿ ಬಿದ್ದಿದ್ದರು.

ದನ ನೀಡಿದ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ ಝೊಹಾರ ಸೇರಿ ಮೂವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ5,12 ಕರ್ನಾಟಕ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ 11,(1)(D) ಪ್ರಾಣಿ ಹಿಂಸೆ ಕಾಯಿದೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಬಗ್ಗೆ ತನಿಖೆ ನಡೆಸಿದಾಗ ಮೂರು ದನಗಳನ್ನು ಆರೋಪಿ A-2 ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ತಂಚಿಬೆಟ್ಟು ನಿವಾಸಿ ಇಬ್ರಾಹಿಂ ಖಲೀಲ್ ಯಾನೆ ತೌಸೀಫ್ ನ ಮನೆಯಲ್ಲಿ ಗೋಮಾಂಸ ಮಾಡುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಧರ್ಮಸ್ಥಳ ಪೊಲೀಸರು ಉಳ್ಳಾದಲ್ಲಿರುವ ಇಬ್ರಾಹಿಂ ಖಲೀಲ್ ಯಾನೆ ತೌಸೀಫ್ ನ ಮನೆಯನ್ನು ನ.4 ರಂದು ಮುಟ್ಟುಗೋಲು ಹಾಕಿ ಜಪ್ತಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News