×
Ad

ಬೆಳ್ತಂಗಡಿ: ಆಟೋ ರಿಕ್ಷಾಗೆ ಲಾರಿ ಢಿಕ್ಕಿ; ಮೂವರಿಗೆ ಗಾಯ

Update: 2023-09-13 13:00 IST

ಬೆಳ್ತಂಗಡಿ: ರಸ್ತೆ ಅಪಘಾತವೊಂದರಲ್ಲಿ ಆಟೋ ರಿಕ್ಷಾವೊಂದು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಿಕ್ಷಾ ಚಾಲಕನ ಸಹಿತ ಮೂವರು ಗಾಯಗೊಂಡ ಘಟನೆ ಘಟನೆ ಉಜಿರೆಯ ಟಿ.ಬಿ ಕ್ರಾಸ್ ಸಮೀಪ ಬುಧವಾರ ಸಂಭವಿಸಿದೆ.

ಬೆಳ್ತಂಗಡಿ ಯಿಂದ ಉಜಿರೆ ಕಡೆಗೆ ಹೋಗುತ್ತಿದ್ದ ವೇಳೆ ಆಟೋ ರಿಕ್ಷಾದ ಮುಂದೆ ಇದ್ದ ಲಾರಿಯೊಂದು ಬ್ರೇಕ್ ಹಾಕಿ ನಿಲ್ಲಿಸಿದ ಕಾರಣ ರಿಕ್ಷಾವನ್ನೂ ನಿಲ್ಲಿಸಬೇಕಾಯಿತು. ಆದರೆ ದುರದೃಷ್ಟವಷಾತ್ ಹಿಂದಿನಿಂದ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಢಿಕ್ಕಿ ಹೊಡಿದಿದೆ. ಎರಡೂ ಲಾರಿಗಳ ಮಧ್ಯೆ ಸಿಲುಕಿಕೊಂಡ ಆಟೋ ರಿಕ್ಷಾ ಸಂಪೂರ್ಣ ಹಾನಿಗೊಳಗಾಗಿದೆ.

ರಿಕ್ಷಾ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ಕೆಲ ಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News