×
Ad

ಬೆಳ್ತಂಗಡಿ | ಗಡಿಪಾರು ಆದೇಶ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ನಲ್ಲಿ ಅರ್ಜಿ

Update: 2025-09-29 18:59 IST

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆ.18ರಂದು ಪುತ್ತೂರು ಎ.ಸಿ ಸ್ಟೆಲ್ಲಾ ವರ್ಗಿಸ್ ಅವರ ಆದೇಶದ ವಿರುದ್ಧ ಮಧ್ಯಂತರ ತಡೆ ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಲು ತಮ್ಮ ವಕೀಲರ ಮೂಲಕ ಸೆ.29 ರಂದು ಹೈಕೋರ್ಟ್ ನಲ್ಲಿ ರಾಜ್ಯ ಸರಕಾರ, ಪುತ್ತೂರು ಎಸಿ, ಡಿವೈಎಸ್ಪಿ, ಬೆಳ್ತಂಗಡಿ ಇನ್ಸ್‌ಪೆಕ್ಟರ್ ಪ್ರತಿವಾದಿಯಾಗಿಸಿ ಅರ್ಜಿ ಸಲ್ಲಿಕ್ಕೆ ಮಾಡಿದ್ದಾರೆ.

ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ಏಕಸದಸ್ಯ ಪೀಠದ ಎದುರು ಮಧ್ಯಂತರ ತಡೆ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದು, ಸೆ.30ರಂದು ನ್ಯಾಯಪೀಠದಲ್ಲಿ ವಿಚಾರಣೆಗೆ ಬರಲಿದೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News