×
Ad

ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಪಿಕಪ್, ಟಿಪ್ಪರ್‌ನಲ್ಲಿ ಅಧ್ಯಯನಕ್ಕೆ ಕರೆದೊಯ್ದ ಮುಖ್ಯ ಶಿಕ್ಷಕ ಕಿರಣ್ ಅಮಾನತು

► ವಾಹನ ಮತ್ತು ಚಾಲಕರ ವಿರುದ್ಧ ಪ್ರಕರಣ ದಾಖಲು

Update: 2026-02-12 20:47 IST

ಬೆಳ್ತಂಗಡಿ : ವಿದ್ಯಾರ್ಥಿಗಳನ್ನು ಕಾನೂನು ಬಾಹಿರವಾಗಿ ಸರಕು ಸಾಗಣೆ ಮಾಡುವ ಪಿಕಪ್ ಮತ್ತು ಟಿಪ್ಪರ್ ವಾಹನ ದಲ್ಲಿ ಅಧ್ಯಯನಕ್ಕೆ ಕರೆದುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕನನ್ನ ಶಿಕ್ಷಣ ಇಲಾಖೆ ಅಮಾನತುಗೊಳಿಸಿದ್ದು, ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ವಾಹನ ಮತ್ತು ಚಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಫೆ.9ರಂದು ಪಿಕಪ್ ಮತ್ತು ಟಿಪ್ಪರ್ ವಾಹನಗಳಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಸ್ಥಳೀಯ ಫಾರ್ಮ್ ಗೆ ಕರೆದುಕೊಂಡು ಹೋಗಿ ವಾಪಸ್ ಕರೆದುಕೊಂಡು ಬಂದಿದ್ದ ವಿಡಿಯೋ ವೈರಲ್ ಅಗಿತ್ತು.

ಈ ಬಗ್ಗೆ ಮಾಧ್ಯಮಗಳ ವರದಿ ಪ್ರಸಾರವಾದ ಬೆನ್ನಲ್ಲೇ ಫೆ.12 ರಂದು ಬೆಳ್ತಂಗಡಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಎಂಬವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. 

ಘಟನೆಯ ಬಗ್ಗೆ ಬಳಂಜ ನಿವಾಸಿ ಧರಣೇಂದ್ರ ಎಂಬವರು ನೀಡಿದ ದೂರಿನಂತೆ ಪಿಕಪ್ ವಾಹನ ಚಾಲಕ ನವೀನ್, ಟಿಪ್ಪರ್ ಚಾಲಕ ಪ್ರವೀಣ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News