×
Ad

ಬೆಳ್ತಂಗಡಿ | ಎಸ್.ಐ.ಟಿ ಕಚೇರಿಗೆ ಬಂದು ದೂರು ನೀಡಿದ ಸೌಜನ್ಯ ತಾಯಿ

Update: 2025-08-28 15:58 IST

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಬಗ್ಗೆ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಕಚೇರಿಗೆ ಆಗಮಿಸಿದ ಸೌಜನ್ಯ ತಾಯಿ ಕುಸುಮಾವತಿ ಅವರು, ಎಸ್.ಐ.ಟಿ ಅಧಿಕಾರಿಗಳಿಗೆ ಗುರುವಾರ ದೂರು ನೀಡಿದ್ದು, ದೂರನ್ನು ಸ್ವೀಕರಿಸಿದ ಅಧಿಕಾರಿಗಳು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹಿಂಬರಹ ನೀಡಿದ್ದಾರೆ.

ಸೌಜನ್ಯ ತಾಯಿ ಕುಸುಮಾವತಿ ಹಾಗೂ ಮನೆಯವರು ಗುರುವಾರ ಮಧ್ಯಾಹ್ನ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದು‌, ಅಧಿಕಾರಿಗಳ ಸೂಚನೆಯ ಮೇರೆಗೆ ಆರಂಭದಲ್ಲಿ ಅಲ್ಲಿಂದ ಹಿಂತಿರುಗಿದ್ದರು. ಆದರೆ, ಬಳಿಕ ಅಧಿಕಾರಿಗಳ ಸೂಚನೆಯಂತೆ ಸೌಜನ್ಯ ತಾಯಿ ಕುಸುಮಾವತಿ ಎಸ್.ಐ.ಟಿ ಕಚೇರಿಗೆ ಬಂದು ದೂರನ್ನು ನೀಡಿದ್ದಾರೆ.

ಸಾಕ್ಷಿ ದೂರುದಾರನಾಗಿ ಬಂದ ಚೆನ್ನಯ್ಯ ಯುಟ್ಯೂಬರ್ ಗಳಿಗೆ ನೀಡಿದ ಸಂದರ್ಶನದಲ್ಲಿ ಸೌಜನ್ಯ ಪ್ರಕರಣದ‌ ಬಗ್ಗೆ ಹಲವು ಹೇಳಿಕೆಗಳನ್ನು ನೀಡಿದ್ದ ಹಿನ್ನೆಲೆಯಲ್ಲಿ ಈ ಬಗ್ಗೆ ತನಿಖೆ ನಡೆಸುವಂತೆ ದೂರು ನೀಡಿರುವುದಾಗಿ ತಿಳಿದು ಬಂದಿದೆ.

ದೂರಿನ ಬಗ್ಗೆ ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News