×
Ad

ಬೆಳ್ತಂಗಡಿ: ನದಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತ್ಯು

Update: 2024-10-14 11:53 IST

ಬೆಳ್ತಂಗಡಿ: ನದಿಗೆ ಇಳಿದಿದ್ದ ಯುವಕನೋರ್ವ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ನೆರಿಯ ಗ್ರಾಮದಲ್ಲಿ ಸಂಭವಿಸಿದೆ.

ನೆರಿಯ ಗ್ರಾಮದ ತೋಟತ್ತಾಡಿ ಪಿತ್ತಿಲು ನಿವಾಸಿ ಶಿವಕುಮಾರ್ ಎಂಬಾತ ಮೃತಪಟ್ಟಿರುವ ಯುವಕ. ಈತ ಭಾನುವಾರ ಗೆಳೆಯರೊಂದಿಗೆ ಮೀನು ಹಿಡಿಯಲು ನೆರಿಯ ಗ್ರಾಮದ ಎಸ್ಟೇಟ್ ಒಂದರ ಸಮೀಪ ನದಿಗೆ ಹೋಗಿದ್ದ ಎನ್ನಲಾಗಿದೆ.

ನದಿಯಲ್ಲಿ ಸಂಜೆಯ ವೇಳೆ ಈತ ನಾಪತ್ತೆಯಾಗಿದ್ದ. ಈತನಿಗಾಗಿ ಸ್ಥಳೀಯರ ನೇತೃತ್ವದಲ್ಲಿ ನಡೆಸಿದ ಹುಡುಕಾಟದಲ್ಲಿ ಮೃತದೇಹ ಪತ್ತೆಯಾಗಿದೆ.

ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News