×
Ad

ಬೆಳ್ತಂಗಡಿ: ಹೃದಯಾಘಾತದಿಂದ ಯುವಕ ಸಾವು

Update: 2023-09-09 16:10 IST

ಬೆಳ್ತಂಗಡಿ :ಯುವಕನೊಬ್ಬ ಮನೆಯಲ್ಲಿರುವ ವೇಳೆ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕಿರ್ನಡ್ಕದಲ್ಲಿ ನಡೆದಿದೆ.

ಮೃತ ಯುವಕನನ್ನು ಕಿರ್ನಡ್ಕ ನಿವಾಸಿ ಕಿಟ್ಟಣ್ಣ ನಾಯ್ಕ ಮತ್ತು ವೇದಾವತಿ ದಂಪತಿಯ ಪುತ್ರ ಪ್ರದೀಪ್ (25) ಎಂದು ಗುರುತಿಸಲಾಗಿದೆ. ಹೃದಯಾಘಾತವಾದ ತಕ್ಷಣವೇ ಉಜಿರೆ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಿದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮೃತ ಯುವಕ ಸಹೋದರಿ ಪದ್ಮಾವತಿ, ಸಹೋದರ ನಿತೇಶ್ ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News