×
Ad

ಬೆಳ್ತಂಗಡಿ| ನೇತ್ರಾವತಿ ನದಿಯಲ್ಲಿ ಮುಳುಗಿ ಯುವಕ ನಾಪತ್ತೆ

Update: 2024-12-02 21:36 IST

ಪ್ರಸಾದ್

ಬೆಳ್ತಂಗಡಿ, ಡಿ.2: ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಸೋಮವಾರ ಸಂಜೆ ನಡೆದಿದೆ.

ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಎಂಬವರು ನದಿಗೆ ಇಳಿದಿದ್ದು ಬಳಿಕ ಮುಳುಗಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆಯನ್ನು ಕರೆಸಲಾಗಿದೆ.

ಮೂವರು ನೀರಿಗೆ ಇಳಿದಿದ್ದು ಈ ವೇಳೆ ಪ್ರಸಾದ್ ನೀರಿನಲ್ಲಿ ಮುಳುಗಿದ್ದಾರೆ, ಪ್ರಸಾದ್ ರನ್ನು ಜತೆಗಿದ್ದವರು ರಕ್ಷಿಸಲು ಯತ್ನಿಸಿದ್ದು, ಈ ವೇಳೆ ಪ್ರಸಾದ್ ಮುಳುಗಿ ನಾಪತ್ತೆಯಾದರು ಎಂದು ತಿಳಿದುಬಂದಿದೆ.

ಪ್ರಸಾದ್ ಅವರು ವಿವಾಹಿತರಾಗಿದ್ದು ಪತ್ನಿ, ಓರ್ವ ಪುತ್ರನಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿದ್ದು, ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News