ಸುಳ್ಯ | ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘದ ಚುನಾವಣೆ : ನಿರ್ದೇಶಕರಾಗಿ ಸಿ.ಎಂ. ರಫೀಕ್ ಐವತ್ತೊಕ್ಲು ಆಯ್ಕೆ
Update: 2025-11-03 23:37 IST
ಸುಳ್ಯ: ತಾಲೂಕು ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ರಫೀಕ್ ಸಿ.ಎಂ. ಐವತ್ತೊಕ್ಲು ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿ ವಿಜೇತರಾಗಿದ್ದಾರೆ.
ಪಂಜ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿದ್ದ ಇವರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಗಳ ಹಲವು ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.