×
Ad

ದೇರಳಕಟ್ಟೆ | ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಬಸ್

Update: 2026-06-23 12:50 IST

ಉಳ್ಳಾಲ: ಚಾಲಕನ ರಕ್ತದೊತ್ತಡ ಕಡಿಮೆಯಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿವೈಡರ್ ಮೇಲೆ ಹತ್ತಿದ ಘಟನೆ ಯೆನೆಪೋಯ ಆಸ್ಪತ್ರೆ ಬಳಿ ಮಂಗಳವಾರ ನಡೆದಿದೆ.

ಗಂಭೀರ ಸ್ಥಿತಿಯಲ್ಲಿದ್ದ ಚಾಲಕ ಜನಾರ್ದನ ಅವರನ್ನು ಬಸ್ ನಿರ್ವಾಹಕ ಹಾಗೂ ಪ್ರಯಾಣಿಕರು ಆಂಬುಲೆನ್ಸ್ ಮೂಲಕ ಯೆನೆಪೋಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆ ವಿವರ: ಮಂಗಳೂರಿನಿಂದ ಮುಡಿಪು ಕಡೆ ಬರುತ್ತಿದ್ದ ಗೋಪಾಲಕೃಷ್ಣ ಬಸ್ ಯೆನೆಪೋಯ ಬಳಿ ತಲುಪಿದಾಗ ಚಾಲಕ ಜನಾರ್ದನ ಅವರಿಗೆ ರಕ್ತದೊತ್ತಡ ಕಡಿಮೆಯಾಗಿದೆ. ಇದರಿಂದ ಅವರ ಆರೋಗ್ಯದ ಮೇಲೆ ಪರಿಣಾಮ ಬೀರಿದ ಹಿನ್ನೆಲೆಯಲ್ಲಿ ಚಾಲನೆಯಲ್ಲಿದ್ದ ಬಸ್ ಅನ್ನು ಅವರು ಡಿವೈಡರ್‌ಗೆ ಹತ್ತಿಸಿದ್ದಾರೆ. ಈ ವೇಳೆ ಗಂಭೀರ ಸ್ಥಿತಿಯಲ್ಲಿದ್ದ ಚಾಲಕ ಜನಾರ್ದನ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

 

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News