×
Ad

ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡೆಯ ಒಂಭತ್ತು ಸ್ಥಳಗಳಲ್ಲಿ ಮಾನವ ಅವಶೇಷಗಳು ಪತ್ತೆ

Update: 2025-09-17 15:31 IST

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ನೇತ್ರಾವತಿ ಸ್ನಾನಘಟ್ಟದ ಸಮೀಪ ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ ಎಸ್.ಐ.ಟಿ. ಶೋಧ ಕಾರ್ಯಾಚರಣೆ ವೇಳೆ ಒಂಭತ್ತು ಸ್ಥಳಗಳಲ್ಲಿ ಮಾನವನ ಮೂಳೆಗಳ ಅವಶೇಷಗಳು ಪತ್ತೆಯಾಗಿವೆ.

 

ಬಂಗ್ಲೆಗುಡ್ಡೆಯಲ್ಲಿ ಇಂದು ನಡೆಸಿದ ಕಾರ್ಯಾಚರಣೆಯಲ್ಲಿ ಒಂಬತ್ತು ಸ್ಥಳಗಳಲ್ಲಿ ಮಾನವನ ಅವಶೇಷಗಳು ಪತ್ತೆಯಾಗಿದ್ದು, ಅದನ್ನು ಅಧಿಕಾರಿಗಳು ಮಹಜರು ನಡೆಸುತ್ತಿದ್ದಾರೆ ಎನ್ನಲಾಗಿದೆ.

 

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿ ಮೃತದೇಹಗಳನ್ನು ಹೂತುಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಪಕ್ಕದ ಬಂಗ್ಲೆಗುಡ್ಡ ಕಾಡಿನಲ್ಲಿ ಬುಧವಾರ ಮತ್ತೆ ಶೋಧ ಕಾರ್ಯ ನಡೆಸುತ್ತಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News