ಧರ್ಮಸ್ಥಳ ಪ್ರಕರಣ | ಗಿರೀಶ್ ಮಟ್ಟಣ್ಣನವರ್ ಅವರ ಮೊಬೈಲ್ ಫೋನ್ ವಶಕ್ಕೆ ಪಡೆದ ಎಸ್ಐಟಿ
Update: 2026-05-08 10:59 IST
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆಗಾಗಿ ಗಿರೀಶ್ ಮಟ್ಟಣ್ಣನವರ್ ಅವರಿಗೆ ಮೊಬೈಲ್ ಫೋನ್ ಹಾಜರುಪಡಿಸುವಂತೆ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಅವರು ಗುರುವಾರ(ಮೇ 7) ಎಸ್ಐಟಿ ಕಚೇರಿಗೆ ಹಾಜರಾಗಿದ್ದಾರೆ. ಈ ವೇಳೆ ಅವರ ಮೊಬೈಲ್ ಫೋನ್ ಅನ್ನು ಎಸ್ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಗಿರೀಶ್ ಮಟ್ಟಣ್ಣವರ್ ಗುರುವಾರ ಬೆಳಗ್ಗೆ ಹಾಜರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ಈ ಹಿಂದೆ ಮಟ್ಟಣ್ಣನವರ್ ಬಳಸುತ್ತಿದ್ದ ಹಳೆಯ ಆಂಡ್ರಾಯ್ಡ್ ಮೊಬೈಲ್ ಅನ್ನು ತನಿಖೆಗಾಗಿ ನೀಡುವಂತೆ ಎಸ್ಐಟಿ ನೋಟೀಸ್ ಜಾರಿ ಮಾಡಿತ್ತು. ಅದರಂತೆ ಮಟ್ಟಣ್ಣನವರ್ ಎಸ್ಐಟಿ ಕಚೇರಿಗೆ ಹಾಜರಾಗಿದ್ದು ಸೋಕೋ ತಂಡದ ನೇತೃತ್ವದಲ್ಲಿ ಮಹಜರು ನಡೆಸಿದ ಎಸ್ಐಟಿ ಅಧಿಕಾರಿಗಳು ಅವರ ಮೊಬೈಲ್ ವಶಪಡಿಸಿಕೊಂಡಿದ್ದಾರೆ.