ಧರ್ಮಸ್ಥಳ ಪ್ರಕರಣ: ಮೂರನೇ ದಿನದ ಕಾರ್ಯಾಚರಣೆ ಆರಂಭ
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣ ಮೂರನೇ ದಿನದ ಅಸ್ಥಿಪಂಜರ ಹುಡುಕಾಟಕ್ಕಾಗಿ ಜುಲೈ 30 ರಂದು 11ಗಂಟೆಯ ಸುಮಾರಿಗೆ ಸಾಕ್ಷಿ ದೂರುದಾರನೊಂದಿಗೆ ಎಸ್.ಐ.ಟಿ ತಂಡ ನೇತ್ರಾವತಿ ಸ್ನಾನಘಟ್ಟಕ್ಕೆ ಆಗಮಿಸಿದೆ.
10 ಗಂಟೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ತನ್ನ ವಕೀಲರ ಜೊತೆ ಆಗಮಿಸಿದ್ದು ಕಚೇರಿಯ ಪ್ರಕ್ರಿಯೆಗಳನ್ನು ಮುಗಿಸಿ ತಂಡ ನೇತ್ರಾವತಿ ಸ್ನಾನಘಟ್ಟಕ್ಕೆ ತಲುಪಿದೆ.
ಎಸ್.ಐ.ಟಿ ತಂಡದ ಅಧಿಕಾರಿಗಳಾದ ಐಪಿಎಸ್ ಅನುಚೇತ್, ಐಪಿಎಸ್ ಜಿತೇಂದ್ರ ಕುಮಾರ್ ದಯಾಮ, ಎಸ್ಪಿ ಸೈಮನ್ , ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಮಂಗಳೂರು ಕೆ.ಎಮ್.ಸಿ ವೈದ್ಯರ ತಂಡ, ಎಫ್ಎಸ್ಎಲ್ ತಂಡ, ಐ.ಎಸ್.ಡಿ ಹಾಗೂ ಇತರ ಅಧಿಕಾರಿಗಳ ತಂಡ ಆಗಮಿಸಿದೆ.
ಇಂದು ಆತ ಗುರುತಿಸಿದ ಎರಡನೆಯ ಸ್ಥಳದಲ್ಲಿ ಅಗೆಯಲು ಸಿದ್ದತೆ ನಡೆಸುತ್ತಿದ್ದಾರೆ.
ಹಿಟಾಚಿ ಬಳಕೆ ಇಲ್ಲ
ಇಂದು ಅಗೆಯಲಿರುವ ಪ್ರದೇಶ ಅರಣ್ಯ ಇಲಾಖೆಗೆ ಸೇರಿದ ಜಾಗವಾಗಿರುವುದಾಗಿ ತಿಳಿದು ಬಂದಿದ್ದು, ಇಲ್ಲಿ ಹಿಟಾಚಿ ಬಳಕೆಗೆ ಅರಣ್ಯ ಇಲಾಖೆಯ ಅನುಮತಿಯಿಲ್ಲ. ಅರಣ್ಯ ಕಾನೂನುಗಳು ಹಿಟಾಚಿ ಬಳಕೆಗೆ ವಿರುದ್ದವಾಗಿದ್ದು ಈ ಕಾರಣದಿಂದಾಗಿ ಕಾರ್ಮಿಕರನ್ನು ಉಪಯೋಗಿಸಿ ಅಗೆಯುವ ಕಾರ್ಯ ನಡೆಯಲಿದೆ.