ಧರ್ಮಸ್ಥಳ ಪ್ರಕರಣ: ಎಸ್.ಐ.ಟಿ ಕಚೇರಿಗೆ ಆಗಮಿಸಿದ ಇಬ್ಬರು ಹೊಸ ದೂರುದಾರರು
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಿರುವ ಘಟನೆಯ ಬಗ್ಗೆ ಇಬ್ಬರು ಹೊಸ ದೂರುದಾರರು ಎಸ್.ಐ ಟಿ ಕಚೇರಿಗೆ ಆಗಮಿಸಿದ್ದಾರೆ.
ಈ ಹಿಂದೆಯೇ ದೂರು ನೀಡಿದ್ದ ಧರ್ಮಸ್ಥಳ ಗ್ರಾಮದ ನಿವಾಸಿಗಳಾದ ಪುರಂದರ ಗೌಡ ಹಾಗೂ ತುಕಾರಾಮ ಗೌಡ ಅವರು ಇಂದು ಮತ್ತೆ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ
ಎಸ್.ಐ.ಟಿ ಕಚೇರಿಗೆ ಆಗಮಿಸುವ ವೇಳೆ ಮಾಧ್ಯಮ ದವರೊಂದಿಗೆ ಮಾತನಾಡಿದ ಪುರಂದರ ಗೌಡ, ನೇತ್ರಾವತಿ ಸ್ನಾನಘಟ್ಟದಲ್ಲಿ ನನ್ನ ಅಂಗಡಿಯಿತ್ತು. ಅಲ್ಲಿದ್ದ ವೇಳೆ ಮೃತದೇಹಗಳನ್ನು ಹೂತು ಹಾಕುವುದನ್ನು ನೋಡಿದ್ದೇನೆ. ಇದೇ ವ್ಯಕ್ತಿ ಇರಬಹುದು ಅಂತ ಅನಿಸುತ್ತಿದೆ. ಒಂದಕ್ಕಿದ ಹೆಚ್ಚು ಜನರು ಸೇರಿ ಮೃತದೇಹಗಳನ್ನು ಹೂತು ಹಾಕುವುದನ್ನು ನೋಡಿದ್ದೇವೆ. ಸಾಕ್ಷಿ ದೂರುದಾರ ತೋರಿಸಿದ ಒಂದನೆಯ ಸ್ಥಳದಲ್ಲಿ ಹಾಗೂ 13ನೆಯ ಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕುವುದನ್ನು ನೋಡಿರುವುದಾಗಿ ತಿಳಿಸಿದ್ದಾರೆ.
ಮತ್ತೋರ್ವ ವ್ಯಕ್ತಿ ತಾನು ಸಾಕ್ಷಿದೂರುದಾರ ತೋರಿಸಿದ ಸ್ಥಳವಲ್ಲದೆ ಬೇರೆ ಸ್ಥಳಗಳಲ್ಲಿ ಮೃತದೇಹಗಳನ್ನು ಹೂತು ಹಾಕಿರುವುದನ್ನು ನೋಡಿದ್ದು, ಈಬಗ್ಗೆ ಎಸ್.ಐ.ಟಿ ಮುಂದೆ ಹೆಚ್ಚಿನ ಮಾಹಿತಿಗಳನ್ನು ನೀಡುವುದಾಗಿ ತಿಳಿಸಿದ್ದಾರೆ.