×
Ad

ಧರ್ಮಸ್ಥಳ ಪ್ರಕರಣ : ಸಾಕ್ಷಿ ದೂರುದಾರ ಚಿನ್ನಯ್ಯನಿಗೆ ಷರತ್ತುಬದ್ಧ ಜಾಮೀನು

Update: 2025-11-24 18:33 IST

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಸಾಕ್ಷಿ ದೂರುದಾರನಾಗಿ ಕಾಣಿಸಿಕೊಂಡು , ಬಳಿಕ ಆರೋಪಿಯಾಗಿ ಜೈಲು ಸೇರಿದ್ದ ಚಿನ್ನಯ್ಯನಿಗೆ ನಗರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಚಿನ್ನಯ್ಯನಿಗೆ ಜಾಮೀನು ನೀಡುವ ವೇಳೆ ಒಂದು ಲಕ್ಷ ರೂ. ಬಾಂಡ್, ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡಬಾರದು ಸೇರಿದಂತೆ 12 ಷರತ್ತುಗಳನ್ನು ನ್ಯಾಯಾಲಯವು ಆತನಿಗೆ ವಿಧಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗೆ ಎಸ್‌ಐಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಮಧ್ಯಂತರ ಚಾರ್ಜ್‌ಶೀಟ್ ಸಲ್ಲಿಸಿತ್ತು. ಬಳಿಕ ಜಿಲ್ಲಾ ಕೋರ್ಟ್‌ನಲ್ಲಿ ಚಿನ್ನಯ್ಯ ಪರ ವಕೀಲರು ಮಂಗಳೂರಿನ ಜಿಲ್ಲಾ ನ್ಯಾಯಾಲಯಕ್ಕೆ ಚಿನ್ನಯ್ಯನಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ.

ಪ್ರಕರಣದಲ್ಲಿ ಅಗಸ್ಟ್ 23ರಂದು ಸುಧೀರ್ಘ ವಿಚಾರಣೆ ಬಳಿಕ ದೂರುದಾರ ಚಿನ್ನಯ್ಯನ ಬಂಧನವಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News