×
Ad

ಧರ್ಮಸ್ಥಳ ದೂರು | ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ ಎರಡನೇ ದೂರುದಾರ ಜಯಂತ್ ಟಿ

Update: 2025-08-04 20:32 IST

ಜಯಂತ್ ಟಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಕಾನೂನು ಬಾಹಿರವಾಗಿ ಮೃತದೇಹಗಳನ್ನು ಹೂತು ಹಾಕಿದ್ದಾರೆ, ಯುವತಿಯ ಮೃತದೇಹವನ್ನು ಹೂತು ಹಾಕಿರುವುದನ್ನು ತಾನು ನೋಡಿದ್ದೇನೆ ಎಂದು ಶನಿವಾರ ಎಸ್.ಐ.ಟಿ ಕಚೇರಿಗೆ ದೂರು ನೀಡಲು‌ ಬಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಎರಡನೇ ದೂರುದಾರ ಜಯಂತ್ ಟಿ ಅವರು ಸೋಮವಾರ ಧರ್ಮಸ್ಥಳ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದಾರೆ.

ಸೋಮವಾರ ಜಯಂತ್ ಟಿ ಅವರು ಬೆಳ್ತಂಗಡಿಯ ಎಸ್.ಐ.ಟಿ ಕಚೇರಿಗೆ ದೂರು ನೀಡಲು ಬಂದಿದ್ದರು. ಈ ವೇಳೆ ಎಸ್ ಐ ಟಿ ಅಧಿಕಾರಿಗಳು ಅವರನ್ನು ಈ ಪ್ರಕರಣದ ಬಗ್ಗೆ ಧರ್ಮಸ್ಥಳ ಠಾಣೆಗೆ ದೂರು ನೀಡುವಂತೆ ಸೂಚಿಸಿದ್ದು, ಅದರಂತೆ ಎರಡನೇ ದೂರುದಾರ ಜಯಂತ್ .ಟಿ ಅವರು ಧರ್ಮಸ್ಥಳ ಠಾಣೆಗೆ ತೆರಳಿ ದೂರನ್ನು ನೀಡಿದ್ದಾರೆ.

ಈ ದೂರಿನ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ 200/DPS/2025 ರಂತೆ ದೂರು ಸ್ವೀಕರಿಸಿಕೊಂಡಿರುವುದಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದು, ಈ ಬಗ್ಗೆ ಮುಂದಿನ ತನಿಖೆಯನ್ನು ನಡೆಸುವುದಾಗಿ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News