ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
Update: 2023-11-03 10:45 IST
ಬೆಳ್ತಂಗಡಿ: ಮಂಗಳೂರು ನೆಹರು ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಅಂಗವಾಗಿ 2023ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಸಂಘ, ಸಂಸ್ಥೆಗಳ ವಿಭಾಗದಲ್ಲಿ ಸಾಂಸ್ಕೃತಿಕ ಕ್ಷೇತ್ರದಲ್ಲಿ ಉಜಿರೆ ಅಶೋಕ್ ಭಟ್ ನೇತೃತ್ವದ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಚಿನ್ಮಯ ಅಚಿತನಗರ, ಉಜಿರೆ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ , ಶಾಸಕ ವೇದವ್ಯಾಸ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.
ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನವು 1998 ರಲ್ಲಿ ಸ್ಥಾಪನೆಗೊಂಡು ಯಕ್ಷಗಾನ, ಸಂಗೀತ, ಸಂಸ್ಕೃತಿ, ಕಲೆ, ಸಾಹಿತ್ಯ ಪ್ರಕಾಶನ, ಕಲಾಶಿಕ್ಷಣ, ಕಲಾವಿದರಿಗೆ ಸಹಾಯ, ಕಲಾ ಕಮ್ಮಟ-ಗೋಷ್ಠಿ, ಸನ್ಮಾನ, ಕಲಾಪ್ರದರ್ಶನ ಹೀಗೆ ಹತ್ತು-ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರ 25 ವರ್ಷಗಳಿಂದ ನಡೆಸುತ್ತಾ ಬಂದಿದೆ.