×
Ad

ದ.ಕ. ಲೋಕಸಭಾ ಕ್ಷೇತ್ರ: ರೋಡ್ ಶೋದಲ್ಲಿ ತೆರಳಿ ಕ್ಯಾ.ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

Update: 2024-04-04 15:08 IST

ಮಂಗಳೂರು, ಎ.4: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ಇಂದು ನಾಮಪತ್ರ ಸಲ್ಲಿಸಿದರು.

ಅದಕ್ಕೂ ಮೊದಲು ಬೃಹತ್ ರೋಡ್ ಶೋ ನಡೆಸಲಾಯಿತು. ಪಕ್ಷದ ಸಾವಿರಾರು ಕಾರ್ಯಕರ್ತರು, ಹಿತೈಷಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಹಾಲಿ ಸಂಸದ ನಳಿನ್ ಕುಮಾರ್ ಕಟೀಲು, ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಶಾಸಕರಾದ ಸುನೀಲ್ ಕುಮಾರ್ ಕಾರ್ಕಳ, ಹರೀಶ್ ಪೂಂಜಾ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್ ಯು., ಉಮಾನಾಥ್ ಕೋಟ್ಯಾನ್, ಭಾಗೀರಥಿ ಮುರುಳ್ಯ, ಪ್ರತಾಪ್ ಸಿಂಹ ನಾಯಕ್, ಭರತ್ ಶೆಟ್ಟಿ ವೈ., ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪ್ರಮುಖರಾದ ಪ್ರಮೋದ್ ಮಧ್ವರಾಜ್ ಹಾಗೂ ಜೆಡಿಎಸ್ ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.

 ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ದ.ಕ. ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಯೂ ಆಗಿರುವ ಮುಲ್ಲೈ ಮುಗಿಲನ್ ಅವರಿಗೆ ನಾಮಪತ್ರ ಸಲ್ಲಿಸಿದರು.

 

 

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News