ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು, ಸೆ.16: ಮುಖ್ಯಮಂತ್ರಿ ಮತ್ತು ಸಂಪುಟ ದರ್ಜೆಯ ಸಚಿವರ ಭದ್ರತೆ ಮತ್ತು ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಸೆ.17ರಂದು 4 ಗಂಟೆಯಿಂದ ಸೆ.19ರಂದು 10 ಗಂಟೆಯ ತನಕ‌ ಮಂಗಳೂರು ನಗರ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟ ನಿಷೇಧಿಸಿ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ.

ಮೇರಿಹಿಲ್ ಹೆಲಿಪ್ಯಾಡಿನ ಸುತ್ತ, ಮುಖ್ಯಮಂತ್ರಿಯವರ ವಾಸ್ತವ್ಯದ ಹೋಟೇಲ್ ಸುತ್ತಮುತ್ತ ಸಚಿವ ಸಂಪುಟ ಸಭೆ ನಡೆಯುವ ಪಡೀಲ್‌ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಕಚೇರಿ ‘ಪ್ರಜಾಸೌಧ’ದ ಸುತ್ತಲಿನ 1 ಕಿಲೋ ಮೀಟರ್ ವ್ಯಾಪ್ತಿಯನ್ನು ‘ತಾತ್ಕಾಲಿಕ ಕೆಂಪು ವಲಯ’ ಎಂದು ಘೋಷಿಸಿ, ಯಾವುದೇ ಮಾದರಿಯ ಡ್ರೋನ್ ಹಾರಾಟ, ಬಳಕೆ ಮತ್ತು ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor