ಸುಲಿಗೆ ಪ್ರಕರಣ: ಮಂಗಳೂರಿನ ಇಬ್ಬರು ಪೊಲೀಸರ ಬಂಧನ
ಮಂಗಳೂರು, ನ.6: ನಗರದ ನೆಹರೂ ಮೈದಾನದಲ್ಲಿ ವಾಕಿಂಗ್ ಮಾಡುತ್ತಿದ್ದ ನಾಗರಿಕರ ಮೊಬೈಲ್, ಎಟಿಎಂ ಕಾರ್ಡ್ ಕಸಿದುಕೊಂಡು ಸುಲಿಗೆ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರು ಪೊಲೀಸರನ್ನು ಬಂಧಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.
ಪಾಂಡೇಶ್ವರ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಈರಣ್ಣ ಬೆನ್ನಿ ಮತ್ತು ಪೊಲೀಸ್ ಕಾನ್‌ಸ್ಟೇಬಲ್ ಶಿವರಾಜ್ ಎಂಬವರು ನಿನ್ನೆ ಸುಲಿಗೆ ಮಾಡಿದ ಬಗ್ಗೆ ಬಂದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.