×
Ad

ಫುಡ್ ಪಾಯಿಸನ್: ವಳಚ್ಚಿಲ್ ಶ್ರೀನಿವಾಸ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ

Update: 2024-02-08 12:41 IST

ಮಂಗಳೂರು, ಫೆ.8: ನಗರ ಹೊರವಲಯದ ವಳಚ್ಚಿಲ್ ಶ್ರೀನಿವಾಸ್ ಕಾಲೇಜಿನ ಹಾಸ್ಟೆಲ್ ನಲ್ಲಿ ಫುಡ್ ಪಾಯಿಸನ್ ನಿಂದಾಗಿ ಕೆಲವು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬುಧವಾರ ನಡೆದಿರುವುದಾಗಿ ವರದಿಯಾಗಿದೆ.

ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ತುಂಬೆ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಫೆ.7ರ ರಾತ್ರಿ ವೇಳೆ ಕೆಲ ವಿದ್ಯಾರ್ಥಿಗಳಿಗೆ ವಾಂತಿ-ಭೇದಿ ಉಂಟಾಗಿದೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಸ್ಟೆಲ್ಗೆ ತೆರಳಿ ಆಹಾರ ಪದಾರ್ಥಗಳನ್ನು ಪರಿಶೀಲನೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.

ಅಸ್ವಸ್ಥ ವಿದ್ಯಾರ್ಥಿಗಳ ಪೈಕಿ ಬಹುತೇಕ ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಹೇಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News