ಮೂಡುಬಿದಿರೆ : ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಗುರುವಾರ ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದಾಗ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಬೆಳುವಾಯಿ ನಿವಾಸಿ, ಇದೇ ಕ್ಷೇತ್ರದ ತಾ.ಪಂ.ನ ಮಾಜಿ ಸದಸ್ಯರಾಗಿದ್ದ ಅವರು ಮಂಗಳೂರಿಗೆ ಕೆಲಸಕ್ಕೆ ಹೋಗುತ್ತಿದ್ದರು. ಗುರುವಾರ ಬೇರೆ ಕಡೆಗೆ ಬದಲಿ ಕೆಲಸಗಾರನಾಗಿ ಹೋಗಿದ್ದರೆನ್ನಲಾಗಿದೆ.

‌ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯ ತಪ್ಪಿ ಕೆಳಕ್ಕೆ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು ಎಂದು ತಿಳಿದು ಬಂದಿದೆ.

ಸಂತೋಷ್ ವಿವಾಹಿತರಾಗಿದ್ದು ಒಂದು ಸಣ್ಣ ಮಗುವಿದೆಯೆಂದು ತಿಳಿದು ಬಂದಿದೆ. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್ ನ ಮೊದಲ ಅವಧಿಯ ಉಪಾಧ್ಯಕ್ಷರಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor