×
Ad

ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ

Update: 2025-05-24 20:10 IST

ಮಂಗಳೂರು: ‘ಶೈಕ್ಷಣಿಕ ಪದವಿ ಪಡೆಯುವುದು ಒಂದು ಸ್ಮರಣೀಯ ಸಂದರ್ಭ. ಅದು ನಮ್ಮ ಜೀವನದ ಪ್ರಯಾಣದ ಒಂದು ಭಾಗ. ನಮ್ಮ ಯಶಸ್ಸನ್ನು ಸಂಭ್ರಮಿಸಬೇಕು ಜೊತೆಗೆ ನಮ್ಮ ವೃತ್ತಿ ಜೀವನ ಪಯಣ ಮುಂದುವರಿಸಬೇಕು’ ಎಂದು ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ ಸಲಹೆ ನೀಡಿದ್ದಾರೆ.

ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

129 ಪದವೀದರರಿಗೆ ಮತ್ತು 26 ಸ್ನಾತಕ್ಕೋತ್ತರ ಪದವೀಧರರಿಗೆ ಪದವಿ ಪ್ರದಾನ ಮಾಡಿ ಭಾಷಣ ಮಾಡಿದರು.

ನೂತನ ಪದವೀದರರು ತೆಗೆದುಕೊಂಡ ಪ್ರತಿಜ್ಞೆಗೆ ಬದ್ಧವಾಗಿ, ಪ್ರಾಮಾಣಿಕತೆಯಿಂದ, ಶ್ರದ್ಧೆ, ಶ್ರಮ, ಕರ್ತವ್ಯ ನಿಷ್ಠೆಯಿಂದ ವೃತ್ತಿ ಜೀವನ ನಿರ್ವಹಿಸಿದರೆ ಯಶಸ್ಸು ಸಾಧಿಸಬಹುದೆಂದು ಸಲಹೆ ನೀಡಿದರು.

ಕಣಚೂರು ಇಸ್ಲಾಮಿಕ್ ಶಿಕ್ಷಣ ಟ್ರಸ್ಟ್ ಅಧ್ಯಕ್ಷರಾದ ಡಾ. ಹಾಜಿ ಯು.ಕೆ. ಮೊನು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಆರೋಗ್ಯ ರಕ್ಷಣಾ ಮಂಡಳಿಯ ಅಧ್ಯಕ್ಷ ಡಾ. ಇಫ್ತಿಕಾರ್ ಫರೀದ್ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಶಹನವಾಜ್ ಮನಿಪಾಡಿಯವರು ನೂತನ ಪದವಿದದರಿಗೆ ಪ್ರತಿಜ್ಞಾ ವಿಧಿವಿಧಾನವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಸ್ನಾತಕೋತ್ತರ ಮೂಳೆ ಶಾಸ್ತ್ರ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಪಡೆದ ಡಾ. ಚೇತನ್ ಕುಮಾರ್ ಗಮನಾರ್ಹ ಸಾಧನೆಯನ್ನು ಪರಿಗಣಿಸಿ ಗೌರವಿಸಲಾಯಿತು.

ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಆಯೋಜಿಸಿದ ಅಂತಿಮ ಎಮ್‌ಬಿಬಿಎಸ್ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಮತ್ತು ರ್ಯಾಂಕ್ ಪಡೆದ ಡಾ. ಅಯಿಮಾನ್ ಫೈಝಾ ಫಾತಿಮಾ ಅವರಿಗೆ ಕಣಚೂರು ಮೋನು ಸ್ವರ್ಣ ಪದಕ ನೀಡಿ ಸನ್ಮಾನಿಸಿದರು.

ವೇದಿಕೆಯಲ್ಲಿ ನಿರ್ದೇಶಕಿ ರೊಹಾರ ಮೋನು, ಕಣಚೂರು ಆರೋಗ್ಯ ವಿಜ್ಞಾನ ಸಲಹಾ ಸಮಿತಿಯ ಅಧ್ಯಕ್ಷ ಡಾ. ಮುಹಮ್ಮದ್ ಇಸ್ಮಾಯೀಲ್, ಸದಸ್ಯ ಡಾ.ಎಂ.ವೆಂಕಟ್ರಾಯ ಪ್ರಭು, ವೈದ್ಯಕೀಯ ಅಧೀಕ್ಷಕ ಡಾ. ಹರೀಶ್ ಶೆಟ್ಟಿ, ಉಪ ವೈದ್ಯಕೀಯ ಅಧೀಕ್ಷಕ ಡಾ. ಅಂಜನ್ ಕುಮಾರ್, ಆಡಳಿತ ಅಧಿಕಾರಿ ಡಾ. ರೋಹನ್ ಮೋನಿಸ್ ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಅಬ್ದುಲ್ ರಹಿಮಾನ್ ಸ್ವಾಗತಿಸಿದರು. ಪ್ರಾಂಶುಪಾಲ ಡಾ. ಶಹನವಾಜ್ ಮನಿಪಾಡಿ ವಂದಿಸಿದರು.ನಿಶ್ಚಿತಾ ಸಾಲಿನ್ಸ್ ಮತ್ತು ಪ್ರೀವಲ್ ಶ್ರೇಯಾ ಕ್ರಾಸ್ತ ಕಾರ್ಯಕ್ರಮ ನಿರೂಪಿಸಿದರು.




 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News