×
Ad

ಕಡಬದಲ್ಲಿ ದ್ವೇಷ ಭಾಷಣ: ವಿಎಚ್ ಪಿ ಮುಖಂಡ ನವೀನ್ ನೆರಿಯ ವಿರುದ್ಧ FIR

Update: 2025-06-05 13:01 IST

ಕಡಬ: ಪ್ರತಿಭಟನೆಯ ವೇಳೆ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ವಿಶ್ವ ಹಿಂದೂ ಪರಿಷತ್ ದ.ಕ. ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಬ ಪೊಲೀಸರು ರಾತ್ರಿ ವೇಳೆ ಮನೆಗೆ ಪ್ರವೇಶಿಸಿ ಜಿಪಿಎಸ್ ಫೋಟೋ ತೆಗೆದಿರುವುದನ್ನು ಪ್ರಶ್ನಿಸಿದ್ದಕ್ಕೆ ನಮ್ಮ ಮುಖಂಡರ ಮೇಲೆ ಸ್ವಯಂಪ್ರೇರಿತ ಕೇಸ್ ದಾಖಲಿಸಿದ್ದಾರೆ ಎಂದು ಆರೋಪಿಸಿ ಬುಧವಾರ ಸಂಜೆ ಕಡಬ ಪೊಲೀಸ್ ಠಾಣೆಯ ಎದುರು ಸಂಘ ಪರಿವಾರದ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಇದರಲ್ಲಿ ಭಾಗವಹಿಸಿದ್ದ ವಿಶ್ವ ಹಿಂದೂ ಪರಿಷತ್ ದ.ಕ. ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಪೊಲೀಸರನ್ನು ಉದ್ದೇಶಿಸಿ ದ್ವೇಷದ ಭಾಷಣ ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸರನ್ನು ಉದ್ದೇಶಿಸಿ ದ್ವೇಷದ ಭಾಷಣ ಮಾಡಿದ್ದಾನೆ ಹಾಗೂ ತನ್ನ ಭಾಷಣದ ವೇಳೆ ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರನ್ನು ಉದ್ದೇಶಿಸಿ ಪ್ರಚೋದನಕಾರಿಯಾಗಿ ಮಾತನಾಡಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಬುಧವಾರ ಸಂಜೆ ಧಾರ್ಮಿಕ ಸಂಘಟನೆಗಳ ಪ್ರಮುಖರು, ಕಡಬ ಪೊಲೀಸ್ ಠಾಣೆಯ ಬಳಿ ಕಡಬ – ಸುಬ್ರಹ್ಮಣ್ಯ ರಸ್ತೆಯಿಂದ ಕಡಬ ಪೊಲೀಸ್ ಠಾಣೆಗೆ ಬರುವ ರಸ್ತೆಯಲ್ಲಿ ನಿಂತು, ನವೀನ್ ನೆರಿಯ ಎಂಬಾತನು ಪೊಲೀಸರನ್ನು ಉದ್ದೇಶಿಸಿ ದ್ವೇಷದ ಭಾಷಣ ಮಾಡಿರುತ್ತಾನೆ ಹಾಗೂ ತನ್ನ ಭಾಷಣದ ವೇಳೆ ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರನ್ನು ಉದ್ದೇಶಿಸಿ ಪ್ರಚೋದನಕಾರಿ ಮಾತನಾಡಿರುತ್ತಾನೆ. ಇದರಿಂದಾಗಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಆತನ ವಿರುದ್ದ ದಿನಾಂಕ: 04.06.2025 ರಂದು ಕಡಬ ಪೊಲೀಸ್ ಠಾಣಾ ಅ.ಕ್ರ 42/2025 ಕಲಂ: 353(2)BNS-2023ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News